ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಪಿಎಸ್ ರದ್ದತಿಗೆ ಮನವಿ

Last Updated 24 ಮೇ 2018, 19:39 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ, ಹಿಂದಿನ ನಿಶ್ಚಿತ ಪಿಂಚಣಿ ಯೋಜನೆಯನ್ನೇ (ಒಪಿಎಸ್) ಜಾರಿಗೊಳಿಸುವಂತೆ ಸರ್ಕಾರಿ ನೌಕರರು ರಾಜ್ಯದ ನೂತನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಗುರುವಾರ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

‘ಒಪಿಎಸ್ ಜಾರಿಗೆ ತರುವುದಾಗಿ ನೀವು ಪ್ರಣಾಳಿಕೆಯಲ್ಲಿ ಹೇಳಿದ್ದಿರಿ. ಆದಷ್ಟು ಬೇಗ ಆ ಕೆಲಸ ಮಾಡಬೇಕು. ಹಾಗೆಯೇ, ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರ ನೌಕರರ ಮಾದರಿಯಲ್ಲೇ ವೇತನ ನಿಗದಿ ಮಾಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟೆವು. ಮನವಿ ಆಲಿಸಿದ ಮುಖ್ಯಮಂತ್ರಿ, ಅಧಿಕಾರಗಳ ತುರ್ತು ಸಭೆ ಕರೆದು ಈ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು’ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ರಾಮು ಹೇಳಿದರು.

ಎನ್‌ಪಿಎಸ್ ರದ್ದತಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಇದೇ ಜ.20ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದಾಗ, ಅವರಿಗೆ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಬೆಂಬಲ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT