ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮದಿದ್ದರೂ ಜೆಡಿಎಸ್, ಕಾಂಗ್ರೆಸ್‌ನ ಬೆಂಬಲದೊಂದಿಗೆ ‘ಮೈತ್ತಿ’ ಸರ್ಕಾರ ರಚಿಸಿ, ಮುಖ್ಯಮಂತ್ರಿಯಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಿದರು.

ವಿಶ್ವಾಸಮತ ಯಾಚನೆ ಪ್ರಸ್ತಾಪ ಮಂಡಿಸಿದ ಎಚ್.ಡಿ.ಕುಮಾರಸ್ವಾಮಿ ಸುದೀರ್ಘ ಭಾಷಣ ಮಾಡಿದರು. ಬಳಿಕ, ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು. ಬಿಎಸ್‌ವೈ ತಮ್ಮಮಾತು ಮುಗಿಸಿ, ಕಲಾಪವನ್ನು ಬಹಿಷ್ಕರಿಸಿ, ಸನದನದಿಂದ ಹೊರ ನಡೆದರು.

ಯಡಿಯೂರಪ್ಪ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಕುಮಾರಸ್ವಾಮಿ, ಕೊನೆಯಲ್ಲಿ ಸದನದಲ್ಲಿ ವಿಶ್ವಾಸ ಮತ ಕೋರಿದರು. ಸಭಾಧ್ಯಕ್ಷರು ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಿ, ಬೆಂಬಲಿಸುತ್ತೇವೆ ಎನ್ನುವವರು ಹೌದು ಎಂದು, ಬೆಂಬಲಿಸದವರು ಇಲ್ಲಾ ಎಂದು ಹೇಳುವಂತೆ ಕೋರಿದರು.

ಬಳಿಕ, ಜೆಡಿಎಸ್–ಕಾಂಗ್ರೆಸ್ ಮೈತ್ರಿ ಕೂಟದ ಸದಸ್ಯರು ಹೌದು ಎಂದು ಧ್ವನಿ ಮತದ ಮೂಲಕ ಬಹುಮತ ತೋರಿದರು. ನಂತರ, ಸಭಾಧ್ಯಕ್ಷ ಕೆ.ಆರ್. ರಮೇಶ್‌ಕುಮಾರ್ ಅವರು ವಿಶ್ವಾಸಮತವನ್ನು ಅನುಮೋದಿಸಿದರು.

ವಿಶ್ವಾಸಮತ ಸಿಗುತ್ತಿದ್ದಂತೆ ಕಾಂಗ್ರೆಸ್–ಜೆಡಿಎಸ್ ಶಾಸಕರು ಪರಸ್ಪರ ಹಸ್ತಲಾಘವ ಮಾಡಿದರು. ಸಿಎಂ ಬಳಿಗೆ ಬಂದು ಶುಭಕೋರಿದರು.

ಸದನದಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಚಿತ್ರ: ಎಎನ್‌ಐ ಟ್ವೀಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.