ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ನಾಳೆ ಪ್ರಕಟ

Last Updated 25 ಮೇ 2018, 13:33 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಶನಿವಾರ(ಮೇ 26) ಪ್ರಕಟಿಸಲಿದೆ.

2017-18ನೇ ಸಾಲಿನ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಶನಿವಾರ ಪ್ರಕಟವಾಗಲಿದೆ ಎಂದು ಶಾಲಾ ಶಿಕ್ಷಣ ಕಾರ್ಯದರ್ಶಿ ಅನಿಲ್ ಸ್ವರೂಪ್ ಅವರು ಟ್ವೀಟ್‌ ಮಾಡಿದ್ದಾರೆ.

ಸಿಬಿಎಸ್ಇ 12ನೇ ತರಗತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮವಾದ ಸಾಧನೆ ತೋರಿದ್ದಾರೆ. ಆದಾಗ್ಯೂ, ಅವರು ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸಿಬೇಕು. ಈ ಪರೀಕ್ಷೆಗಳು ಜಗತ್ತಿನ ಕೊನೆಯೇನೂ ಅಲ್ಲ. ನೀವು ಚೆನ್ನಾಗಿ ಪರೀಕ್ಷೆ ಬರೆದಿದ್ದಲ್ಲಿ ವಿಶ್ವಾಸದಿಂದಿರಿ. ಯಾವುದೇ ಬಗೆಯ ವೈಫಲ್ಯವು ಭವಿಷ್ಯದಲ್ಲಿ ನೀವು ಯಶಸ್ವಿಯಾಗುವುದನ್ನು ಇನ್ನಷ್ಟು ದೃಢೀಕರಿಸಬೇಕು ಎಂದು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT