ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ ಖಾತೆಗೆ ಶೇ 8.55 ಬಡ್ಡಿ

Last Updated 25 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ‘ಉದ್ಯೋಗಿಗಳ ಭವಿಷ್ಯನಿಧಿ ಸಂಘಟನೆಯ (ಇಪಿಎಫ್‌ಒ) ಚಂದಾದಾರರ ಖಾತೆಗಳಿಗೆ 2017–18ನೆ ಹಣಕಾಸು ವರ್ಷಕ್ಕೆ ಶೇ 8.55ರಷ್ಟು ಬಡ್ಡಿ  ಪಾವತಿಸಲು ಕಾರ್ಮಿಕ ಸಚಿವಾಲಯ ಸೂಚಿಸಿದೆ.

5 ಕೋಟಿ ಚಂದಾದಾರರ ಖಾತೆಗಳಿಗೆ ಈ ಬಡ್ಡಿ ಪಾವತಿಸಲು ‘ಇಪಿಎಫ್‌ಒ’ದ 120ಕ್ಕೂ ಹೆಚ್ಚು ಕಚೇರಿಗಳಿಗೆ ಆದೇಶಿಸಲಾಗಿದೆ. ಈ ಬಡ್ಡಿ ದರಕ್ಕೆ ಹಣಕಾಸು ಸಚಿವಾಲಯವು ಈಗಾಗಲೇ ತನ್ನ ಅನುಮೋದನೆ ನೀಡಿದ್ದರೂ, ಚುನಾವಣಾ ನೀತಿ ಸಂಹಿತೆ ಜಾರಿ ಕಾರಣಕ್ಕೆ ಅದನ್ನು ಕಾರ್ಯಗತಗೊಳಿಸಿರಲಿಲ್ಲ. ಈ ಬಡ್ಡಿ ದರವು ಐದು ವರ್ಷಗಳಲ್ಲಿನ ಕನಿಷ್ಠ ಮಟ್ಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT