ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳರಂಡಿ ಅವ್ಯವಸ್ಥೆ: ಆರೋಗ್ಯ ಪರಿವೀಕ್ಷಕನಿಗೆ ತರಾಟೆ

Last Updated 27 ಮೇ 2018, 11:27 IST
ಅಕ್ಷರ ಗಾತ್ರ

ನಾಗಮಂಗಲ: ಒಳಚರಂಡಿ ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಪರಿಶೀಲನೆ ಮಾಡಲು ಸ್ಥಳಕ್ಕೆ ಬಂದ ಪುರಸಭೆ ನೌಕರನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿರುವ ಘಟನೆ ಪಟ್ಟಣದ 15ನೇ ವಾರ್ಡ್‌ನಲ್ಲಿ ನಡೆದಿದೆ.

ಈ ವಾರ್ಡ್‌ನಲ್ಲಿ ಕಳೆದ ಹಲವು ದಿನಗಳಿಂದ ಒಳಚರಂಡಿ ಅವ್ಯವಸ್ಥೆ ಉಂಟಾಗಿದ್ದು, ಇಲ್ಲಿನ ನಾಗರಿಕರಿಗೆ ಸಾಕಷ್ಟು ಕಿರಿಕಿರಿ ಉಂಟು ಮಾಡಿತ್ತು. ಈ ಬಗ್ಗೆ ಪರಿಶೀಲನೆ ಮಾಡಲು ಪುರಸಭೆ ಆರೋಗ್ಯ ಪರಿವೀಕ್ಷಕ ನಿಂಗೇಗೌಡ ಅವರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಸಾರ್ವಜನಿಕರು ಮತ್ತು ಅವರ ನಡುವೆ ಮಾತಿನ ಚಕಮಕಿ ನಡೆದು ಅವರನ್ನು ಎಳೆದಾಡಿದರು ಎನ್ನಲಾಗಿದೆ.

ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರು ಸ್ಥಳೀಯರನ್ನು ಸಮಾಧಾನ ಪಡಿಸಿ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು. ಬಳಿಕ ಸಾರ್ವಜನಿಕರು ತಣ್ಣಗಾದರು.

ಒಳಚರಂಡಿ ಸ್ವಚ್ಛಗೊಳಿಸುವ ಸಕಿಂಗ್ ಯಂತ್ರ ಮತ್ತು ಕೆಲಸಗಾರರನ್ನು ಕರೆಸಿ ಸಮಸ್ಯೆ ಬಗೆಹರಿಸಿದ ಪುರಸಭೆ ಮುಖ್ಯಾಧಿಕಾರಿ, ಶೀಘ್ರದಲ್ಲಿ ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT