ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಠುವಾ ಅತ್ಯಾಚಾರ: ಪಠಾಣ್‌ಕೋಟ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ

ದಾಖಲೆಗಳನ್ನು ಜೂನ್ 4ರೊಳಗೆ ಇಂಗ್ಲಿಷ್‌ಗೆ ಅನುವಾದಿಸಲು ಆದೇಶ
Last Updated 31 ಮೇ 2018, 13:29 IST
ಅಕ್ಷರ ಗಾತ್ರ

ಪಠಾಣ್‌ ಕೋಟ್‌ (ಪಂಜಾಬ್‌): ‘ಕಠುವಾ ಪ್ರಕರಣ’ ಎಂದೇ ದೇಶವ್ಯಾಪಿ ಗುರುತಿಸಿಕೊಂಡಿರುವ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ಪಠಾಣ್‌ಕೋಟ್ ನ್ಯಾಯಾಲಯದಲ್ಲಿ ಗುರುವಾರ ಆರಂಭವಾಯಿತು.

ಎಂಟು ಆರೋಪಿಗಳ ಪೈಕಿ ಏಳು ಮಂದಿಯನ್ನು ಪಠಾಣ್‌ಕೋಟ್‌ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಮತ್ತೊಬ್ಬ ಆರೋಪಿಯ ವಿಚಾರಣೆ ಕಠುವಾದ ಬಾಲಾ ನ್ಯಾಯಮಂಡಳಿಯಲ್ಲಿ ನಡೆಯಲಿದೆ.

ವಾದ, ವಿವಾದಗಳನ್ನು ಆಲಿಸಿದ ನ್ಯಾಯಾಲಯ, ಕೇಸ್‌ ಡೈರಿ, ಹೇಳಿಕೆಗಳು ಮತ್ತು ದೋಷಾರೋಪ ಪಟ್ಟಿಯನ್ನು ಉರ್ದುವಿನಿಂದ ಇಂಗ್ಲಿಷ್‌ಗೆ ತರ್ಜುಮೆ ಮಾಡಿ ಜೂನ್‌ 4ರೊಳಗೆ ಮಂಡಿಸುವಂತೆ ಆದೇಶಿಸಿದೆ.

ವಿಚಾರಣೆ ಸಂಬಂಧ ದೆಹಲಿ ಹಾಗೂ ಪಠಾಣ್‌ಕೋಟ್‌ ನ್ಯಾಯಾಲಯದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಕಠುವಾ ನ್ಯಾಯಾಲಯದಲ್ಲಿಯೇ ಪ್ರಕರಣದ ಆರಂಭಿಕ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ವಿಚಾರಣೆಯನ್ನು ಚಂಡಿಗಡಕ್ಕೆ ವರ್ಗಾಯಿಸಬೇಕು ಎಂದು ಸಂತ್ರಸ್ಥೆಯ ತಂದೆ ಸುಪ್ರಿಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್‌ ಪ್ರಕರಣವನ್ನು ಪಠಾಣ್‌ಕೋಟ್‌ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT