ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌: ಕೇಂದ್ರ, ಎಂಸಿಐಗೆ ಸುಪ್ರೀಂ ನೋಟಿಸ್‌

ನಿಗದಿ ಪಡಿಸಿರುವ ಗರಿಷ್ಠ ವಯೋಮಿತಿ ಪ್ರಶ್ನಿಸಿ ಅರ್ಜಿ
Last Updated 4 ಜೂನ್ 2018, 12:35 IST
ಅಕ್ಷರ ಗಾತ್ರ

ನವದೆಹಲಿ: ‘ನೀಟ್‌’ ಪರೀಕ್ಷೆಗೆ ನಿಗದಿ ಪಡಿಸಿರುವ ಗರಿಷ್ಠ ವಯೋಮಿತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಕೇಂದ್ರ ಸರ್ಕಾರ ಹಾಗೂ ಭಾರತೀಯ ವೈದ್ಯಕೀಯ ಮಂಡಳಿ(ಎಂಸಿಐ)ಗೆ ಸುಪ್ರೀಂ ಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಅರ್ಹತಾ ಪರೀಕ್ಷೆ ‘ನೀಟ್‌’ ಬರೆಯಲು ಸಾಮಾನ್ಯ ವರ್ಗದ ಅಭ್ಯರ್ಥಿಗೆ ಗರಿಷ್ಠ ವಯೋಮಿತಿ 25 ಹಾಗೂ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 30 ವರ್ಷ ನಿಗದಿಯಾಗಿದೆ. ಇದನ್ನು ಪ್ರಶ್ನಿಸಿ ಜಲಾಲುದ್ಧೀನ್‌.ಟಿ ಹಾಗೂ ಇತರರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆದರ್ಶ್‌ ಕುಮಾರ್‌ ಗೋಯಲ್‌ ಮತ್ತು ನ್ಯಾ.ಅಶೋಕ್‌ ಭೂಷಣ್‌ ಅವರನ್ನು ಒಳಗೊಂಡ ರಜೆ ಕಾಲದ ನ್ಯಾಯಪೀಠ, ಕೇಂದ್ರ ಸರ್ಕಾರ ಮತ್ತು ಎಂಸಿಐಗೆ ನೋಟಿಸ್‌ ಜಾರಿ ಮಾಡಿ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿದೆ. ಜುಲೈ 2ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT