ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಮುಂದುವರಿದ ಮಳೆ: ತ್ರಿವೇಣಿ ಸಂಗಮ ನೀರಿನ ಮಟ್ಟ ಏರಿಕೆ

Last Updated 9 ಜೂನ್ 2018, 7:35 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗಾಳಿ, ಮಳೆಯ ಆರ್ಭಟ ಶನಿವಾರ ಮುಂದುವರಿದಿದೆ.

ಶುಕ್ರವಾರ ರಾತ್ರಿಯಿಡೀ ಭಾರಿ ಮಳೆಯಾಗಿದೆ. ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸತತ ಮಳೆ ಸುರಿಯುತ್ತಿದೆ.

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆ ಆಗುತ್ತಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹಾರಂಗಿ ಜಲಾಶಯದ ಮಟ್ಟ 2,792 ಅಡಿಗೆ ತಲುಪಿದೆ. ಗರಿಷ್ಠ ಮಟ್ಟ 2,858 ಅಡಿಯಾಗಿದ್ದು ಶನಿವಾರ ಬೆಳಿಗ್ಗೆ 8ರ ವೇಳೆಗೆ 1,400 ಕ್ಯುಸೆಕ್ ಒಳ ಹರಿವು ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT