ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲ್ಲೂರು ಕೆರೆ: ಕಾಮಗಾರಿ ಆರಂಭ

ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಪುನಶ್ಚೇತನ ಕಾರ್ಯ
Last Updated 17 ಜೂನ್ 2018, 12:53 IST
ಅಕ್ಷರ ಗಾತ್ರ

ಚಿತ್ರದುರ್ಗ: ತಾಲ್ಲೂಕಿನ ಭೀಮಸಮುದ್ರದ ಸಮೀಪದ ಹುಲ್ಲೂರು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಗ್ರಾಮಸ್ಥರ ಸಹಕಾರದಿಂದ ಕೆರೆ ಪುನಶ್ಚೇತನ ಕಾರ್ಯ ನಡೆಯುತ್ತಿದೆ.

ಡಿ.ವೀರೇಂದ್ರ ಹೆಗ್ಗಡೆ ಅವರ ಆಶಯದಂತೆ ಎರಡು ವರ್ಷಗಳಿಂದ ರಾಜ್ಯದಾದ್ಯಂತ ‘ನಮ್ಮೂರು ನಮ್ಮ ಕೆರೆ’ ಎಂಬ ಯೋಜನೆಯಡಿ ಕೆರೆಗಳ ಜೀರ್ಣೋದ್ಧಾರ ಮಾಡಿದ್ದಾರೆ.

ಪರಿಸರ ಕಾಳಜಿ, ಜಲ ಸಂರಕ್ಷಣೆ ದೃಷ್ಟಿಯಿಂದ ಗ್ರಾಮೀಣ ಪ್ರದೇಶದಲ್ಲಿ ಹೂಳು ತುಂಬಿದ ಕೆರೆಗಳನ್ನು ಆಯ್ಕೆ ಮಾಡಿಕೊಂಡು ಸಂಸ್ಥೆಯಿಂದ ಅನುದಾನ ನೀಡಿ ಪುನಶ್ಚೇತನ ಕಾರ್ಯ ಕೈಗೊಳ್ಳಲಾಗಿದೆ. ಇದೊಂದು ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಗ್ರಾಮಸ್ಥರು.

’ನಮ್ಮ ಊರಿನ ಕೆರೆ ಆಯ್ಕೆ ಮಾಡಿ ಪುನಶ್ಚೇತನ ಗೊಳಿಸುತ್ತಿರುವುದು ಉತ್ತಮ ಕೆಲಸ. ಕೆರೆಯ ಅಭಿವೃದ್ಧಿಯಿಂದ ಸುತ್ತಲಿನ ರೈತರಿಗೆ ಉಪಯೋಗವಾಗುತ್ತದೆ’ ಎನ್ನುತ್ತಾರೆ ಕೆರೆ ಸಮಿತಿ ಅಧ್ಯಕ್ಷ ಎಚ್.ಎನ್. ಕಲ್ಲೇಶ್.

ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ವಿ. ಗಣೇಶ್ ಮಾತನಾಡಿ, ’ಕೆರೆ ಕಾಮಗಾರಿಗೆ ಗ್ರಾಮಸ್ಥರು ಉತ್ತಮ ಸಹಕಾರ ನೀಡುತ್ತಿದ್ದಾರೆ. ಸಂಸ್ಥೆಯಿಂದ ಜಿಲ್ಲೆಯ 6 ತಾಲ್ಲೂಕುಗಳಿಗೆ ₹ 10 ಲಕ್ಷ ಮಂಜೂರಾಗಿದ್ದು, ಆಯ್ಕೆಯಾದ ಎಲ್ಲ ಕೆರೆಗಳ ಕಾಮಗಾರಿ ಭರದಿಂದ ಸಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT