ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಒತ್ತುವರಿ ತೆರವಿಗೆ ಕ್ರಮ: ಸಚಿವ ಶಂಕರ್

Last Updated 18 ಜೂನ್ 2018, 16:27 IST
ಅಕ್ಷರ ಗಾತ್ರ

ದಾವಣಗೆರೆ: ರೈತರಿಗೆ ಅನ್ಯಾಯ ಆಗದಂತೆ ಅರಣ್ಯ ಒತ್ತುವರಿ ತೆರವುಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಆರ್. ಶಂಕರ್ ತಿಳಿಸಿದರು.

ಅರಣ್ಯ ಇಲಾಖೆಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡು ಒತ್ತುವರಿ ಆಗುವುದನ್ನು ತಡೆಯುವುದು ಹಾಗೂ ಒತ್ತುವರಿ ತೆರವುಗೊಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಬಗರ್‌ಹುಕುಂ ಸಾಗುವಳಿದಾರರಿಗೆ ಭೂಮಿ ಹಂಚುವ ಬಗ್ಗೆ ಕೆಲವು ಕ್ರಮಗಳನ್ನು ಕೈಗೊಂಡಿದ್ದರು. ಈ ಕುರಿತು ಬಾಕಿ ಇರುವ ಕಡತಗಳನ್ನು ಶೀಘ್ರವೇ ಪರಿಶಿಲಿಸಿ, ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.

10ರಿಂದ 20 ವರ್ಷಗಳ ಕಾಲ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸೇವೆಯನ್ನು ಕಾಯಂಗೊಳಿಸುವ ಬಗ್ಗೆ ವಿಶೇಷ ಗಮನ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ನಿಯಮಾವಳಿಗಳನ್ನು ಉಲ್ಲಂಘಿಸಿ ಪರಿಸರ ಮಾಲಿನ್ಯ ಮಾಡುತ್ತಿರುವ ಕಾರ್ಖಾನೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ಕಾರ್ಖಾನೆಯನ್ನೂ ಮುಚ್ಚಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹಾವೇರಿ ಜಿಲ್ಲೆಯ ಹೊಲಗಳಲ್ಲಿ ಕೃಷ್ಣಮೃಗಗಳು ಬೆಳೆಯ ಚಿಗುರು ತಿನ್ನುತ್ತಿರುವುದು ಗಮನಕ್ಕೆ ಬಂದಿದೆ. ಅವುಗಳ ಹಾವಳಿಯನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT