ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ತಿನಲ್ಲಿ ಯೋಗ ದಿನಾಚರಣೆ

Last Updated 18 ಜೂನ್ 2018, 16:30 IST
ಅಕ್ಷರ ಗಾತ್ರ

ಮೆಲ್ಬರ್ನ್‌: ಆಸ್ಟ್ರೇಲಿಯಾದ ಸಂಸತ್ತಿನಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ಯೋಗ ದಿನ ಆಚರಿಸಲಾಯಿತು. ಮಾಜಿ ಪ್ರಧಾನಿ ಟೋನಿ ಅಬೋಟ್‌ ಸೇರಿದಂತೆ ಹಲವು ಸಂಸದರು ವಿವಿಧ ಆಸನಗಳನ್ನು ಪ್ರದರ್ಶಿಸಿದರು.

ಮೆಲ್ಬರ್ನ್‌ ಮೂಲದ ವಾಸುದೇವ ಕ್ರಿಯಾ ಯೋಗ ತಂಡವು ಕ್ಯಾನ್‌ಬೆರಾದಲ್ಲಿನ ಸಂಸತ್‌ನ ಕಮ್ಯುನಿಟಿ ಹಾಲ್‌ನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಇದೇ 21ರಂದು ನಡೆಯಲಿರುವ 4ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕಾರ್ಯಕ್ರಮ ಜರುಗಿತು. ಸುಮಾರು 50 ಮಂದಿ ಯೋಗದ ಹಲವು ಆಸನಗಳನ್ನು ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT