ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಯುಟಿ, ಎನ್ಇಟಿ ದಿನಾಂಕ ಪ್ರಕಟ

Published 19 ಸೆಪ್ಟೆಂಬರ್ 2023, 11:20 IST
Last Updated 19 ಸೆಪ್ಟೆಂಬರ್ 2023, 11:20 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ–ಯುಜಿ) ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶ ಪರೀಕ್ಷೆ (ಸಿಯುಇಟಿ–ಪಿಜಿ) ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳ (ಎನ್‌ಇಟಿ) ದಿನಾಂಕವನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)  ಮಂಗಳವಾರ ಘೋಷಿಸಿದೆ.  

2024–25ನೇ ಶೈಕ್ಷಣಿಕ ವರ್ಷದ ಸಿಯುಇಟಿ –ಯುಜಿ ಪರೀಕ್ಷೆಯು ಮೇ 15ರಿಂದ 31ರವರೆಗೆ ನಡೆಯಲಿದೆ. ಕೊನೆಯ ಪರೀಕ್ಷೆ ನಡೆದ ನಂತರದ ಮೂರು ವಾರಗಳ ಒಳಗಾಗಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಯುಜಿಸಿ ಮುಖ್ಯಸ್ಥ ಎಂ.ಜಗದೀಶ್‌ ಕುಮಾರ್‌ ತಿಳಿಸಿದ್ದಾರೆ.

ಸಿಯುಇಟಿ–ಪಿಜಿ  ಪರೀಕ್ಷೆಯು ಮಾರ್ಚ್‌ 11ರಿಂದ 28ರವರೆಗೆ ನಡೆಯಲಿದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯು ಜೂನ್‌ 10ರಿಂದ 21ರವರೆಗೆ ನಡೆಯಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT