ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್

Published 3 ಮೇ 2024, 8:08 IST
Last Updated 3 ಮೇ 2024, 8:08 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಏಪ್ರಿಲ್ 30ರಂದು ಸಿಸೋಡಿಯಾ ಅವರಿಗೆ ಜಾಮೀನು ನೀಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರ ಪೀಠ, ಸಿಬಿಐ ಹಾಗೂ ಇ.ಡಿಗೆ ನೋಟಿಸ್‌ ಜಾರಿ ಮಾಡಿತು.

ಮೇ 8ರಂದು ಪ್ರಕರಣವನ್ನು ವಿಚಾರಣೆ ನಡೆಸಲು ಪಟ್ಟಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT