ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ: ಎರಡು ಪಂಗಡಗಳ ನಡುವೆ ಗುಂಡಿನ ಚಕಮಕಿ

Published 28 ಏಪ್ರಿಲ್ 2024, 4:56 IST
Last Updated 28 ಏಪ್ರಿಲ್ 2024, 4:56 IST
ಅಕ್ಷರ ಗಾತ್ರ

ಇಂಫಾಲ: ಜನಾಂಗೀಯ ಕಲಹಕ್ಕೆ ಸಾಕ್ಷಿಯಾಗಿರುವ ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಎರಡು ಪಂಗಡಗಳ ಸ್ವಯಂ ಸೇವಕರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್‌ಪೋಕ್ಪಿ ಜಿಲ್ಲೆಯ ಪಕ್ಕದ ಬೆಟ್ಟಗಳಿಂದ ಇಂಫಾಲ್ ಕಣಿವೆಯ ವ್ಯಾಪ್ತಿಯಲ್ಲಿರುವ ಕೌತ್ರುಕ್ ಗ್ರಾಮದ ಮೇಲೆ ಶಸ್ತ್ರಸಜ್ಜಿತ ವ್ಯಕ್ತಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ದಾಳಿಯಿಂದ ಕೆಲವು ಮನೆಯ ಗೋಡೆಗಳು ಬಿರುಕುಬಿಟ್ಟಿವೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಸ್ಥಳೀಯವಾಗಿ ತಯಾರಿಸಿದ ಶೆಲ್‌ಗಳನ್ನು ಗ್ರಾಮದ ಮೇಲೆ ಹಾರಿಸಲಾಗಿದ್ದು, ಜನ ಭಯಭೀತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೌತ್ರುಕ್‌ ಗ್ರಾಮಸ್ಥರು ತಮ್ಮ ಮೇಲಿನ ದಾಳಿಗೆ ತಿರುಗೇಟು ನೀಡಿದ್ದು, ಗುಂಡಿನ ಚಕಮಕಿ ನಡೆದಿದೆ. ಸ್ಥಳಕ್ಕೆ ಭದ್ರತಾ ಸಿಬ್ಬಂದಿ ದೌಡಾಯಿಸಿದ್ದು ಪರಿಸ್ಥಿತಿ ಹತೋಟಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT