ನವದೆಹಲಿ: ಮಾನ್ಯತೆ ಪಡೆದ ಮಂಡಳಿಗಳಿಂದ ದ್ವಿತೀಯ ಪಿಯು ಅಥವಾ 12ನೇ ತರಗತಿ ಉತ್ತೀರ್ಣರಾದ ಬಳಿಕ ಹೆಚ್ಚುವರಿ ವಿಷಯವಾಗಿ ಇಂಗ್ಲಿಷ್ ಜತೆಗೆ ಭೌತವಿಜ್ಞಾನ, ರಸಾಯನ ವಿಜ್ಞಾನ, ಜೀವವಿಜ್ಞಾನ ಅಥವಾ ಜೈವಿಕ ತಂತ್ರಜ್ಞಾನ ವಿಷಯಗಳನ್ನು ಅಧ್ಯಯನ ಮಾಡಿ ಪಾಸಾಗಿರುವ ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್– ಯುಜಿ’ ಬರೆಯಲು ಅರ್ಹತೆ ಪಡೆದಿದ್ದಾರೆ.