ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್‌ಗೆ ಕೋವಿಡ್‌ ದೃಢ: ಜಿ20 ಶೃಂಗಸಭೆಗೆ ಗೈರು

Published 8 ಸೆಪ್ಟೆಂಬರ್ 2023, 4:09 IST
Last Updated 8 ಸೆಪ್ಟೆಂಬರ್ 2023, 4:09 IST
ಅಕ್ಷರ ಗಾತ್ರ

ನವದೆಹಲಿ: ಸ್ಪೇನ್ ಹಂಗಾಮಿ ಪ್ರಧಾನಿ ಪೆಡ್ರೊ ಸ್ಯಾಂಚೆಜ್‌ ಅವರಿಗೆ ಕೋವಿಡ್‌ ದೃಢಪಟ್ಟಿದ್ದು ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಸ್ಪೇನ್ ಸರ್ಕಾರದ ಅಧಿಕಾರಿಗಳು ಹೇಳಿದ್ದಾರೆ.

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಶನಿವಾರ ಮತ್ತು ಭಾನುವಾರ ಜಿ20 ಶೃಂಗಸಭೆ ನಡೆಯುತ್ತಿದೆ. ಪೆಡ್ರೊ ಸ್ಯಾಂಚೆಜ್‌ ಅವರಿಗೆ ಕೋವಿಡ್‌ ದೃಢಪಟ್ಟಿರುವುದರಿಂದ ಅವರು ಭಾಗವಹಿಸುತ್ತಿಲ್ಲ. ಸ್ಪೇನ್ ಪ್ರತಿನಿಧಿಗಳಾಗಿ ಉಪಾಧ್ಯಕ್ಷ ನಾಡಿಯಾ ಹಾಗೂ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಪಾಲ್ಗೊಳ್ಳುತ್ತಿದ್ದಾರೆ ಎಂದು ಸ್ಪೇನ್‌ ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. 

ಈ ಬಗ್ಗೆ ಪೆಡ್ರೊ ಸ್ಯಾಂಚೆಜ್‌ ಕೂಡ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್‌ ದೃಢಪಟ್ಟಿದ್ದು, ಯಾವ ರೋಗ ಲಕ್ಷಣಗಳು ಇಲ್ಲದೇ ಆರೋಗ್ಯವಾಗಿದ್ದೇನೆ. ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್‌, ಚೀನಾ ಅಧ್ಯಕ್ಷ ಷಿ ಜಿಂಗ್‌ಪಿಂಗ್‌, ಸ್ಪೇನ್ ಹಂಗಾಮಿ ಪ್ರಧಾನಿ ಪೆಡ್ರೊ ಸ್ಯಾಂಚೆಜ್‌ ಶೃಂಗಸಭೆಗೆ ಹಾಜರಾಗುತ್ತಿಲ್ಲ.

ಎಲ್ಲ G20 ರಾಷ್ಟ್ರಗಳು ಸೇರಿದಂತೆ ಬಾಂಗ್ಲಾದೇಶ, ಈಜಿಪ್ಟ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಓಮನ್, ಸಿಂಗಾಪುರ್, ಸ್ಪೇನ್ ಮತ್ತು ಯುಎಇ ದೇಶಗಳ ನಾಯಕರು ಕೂಡ ಭಾಗವಹಿಸಲಿದ್ದಾರೆ.

ಇದರ ಜೊತೆಗೆ ಯುರೋಪಿಯನ್ ಒಕ್ಕೂಟದ 30ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು, ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿ ದೇಶಗಳು ಹಾಗೂ 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT