ನವದೆಹಲಿ: ಉತ್ತರಪ್ರದೇಶ ಕಾಂಗ್ರೆಸ್ ನಾಯಕ ಅಜಯ್ ಕಪೂರ್ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಉತ್ತರಪ್ರದೇಶ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಜಂಟಿ ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿದ ಅಜಯ್ ಕಪೂರ್, ಕಾಂಗ್ರೆಸ್ ಪಕ್ಷದಲ್ಲಿದ್ದ 37 ವರ್ಷಗಳ ಕಾಲ ಅತ್ಯಂತ ಪ್ರಾಮಾಣಿಕನಾಗಿ ಕೆಲಸ ಮಾಡಿದ್ದೇನೆ ಎಂದರು.

ಮೋದಿಯವರನ್ನು ‘ಯುಗಪುರಷ’ ಎಂದು ಬಣ್ಣಿಸಿದ ಅಜಯ್, ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಪ್ರಧಾನಿ ನರೇಂದ್ರ ಮೋದಿಯವರ ಕುಟುಂಬಕ್ಕೆ ಸೇರಬೇಕು ಎಂದು ಕರೆ ನೀಡಿದ್ದಾರೆ.

‘ಇಂದು ನನ್ನ ಹೊಸ ಜೀವನ ಆರಂಭವಾಗಿದೆ. ಮುಂದಿನ ರಾಜಕೀಯ ಜೀವನದಲ್ಲಿ ಬಿಜೆಪಿಯ ನಾಯಕತ್ವ ಮತ್ತು ಮಾರ್ಗದರ್ಶನದೊಂದಿಗೆ ಕೆಲಸ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಕಪೂರ್, ಉತ್ತರ ಪ್ರದೇಶದ ಗೋವಿಂದನಗರ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.