ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂದೇಶ್‌ಖಾಲಿ | ರಾಜ್ಯ ಏಕೆ ವ್ಯಕ್ತಿಗಳ ಹಿತ ಕಾಯಬೇಕು: ಸುಪ್ರೀಂ ಕೋರ್ಟ್ ಪ್ರಶ್ನೆ

Published 29 ಏಪ್ರಿಲ್ 2024, 16:00 IST
Last Updated 29 ಏಪ್ರಿಲ್ 2024, 16:00 IST
ಅಕ್ಷರ ಗಾತ್ರ

ನವದೆಹಲಿ: ಸಂದೇಶ್‌ಖಾಲಿ ಪ್ರಕರಣದಲ್ಲಿ ಕೆಲವು ವ್ಯಕ್ತಿಗಳ ಹಿತಾಸಕ್ತಿಗಳನ್ನು ಕಾಪಾಡುವುದಕ್ಕೆ ರಾಜ್ಯ ಸರ್ಕಾರವು ಏಕೆ ಅರ್ಜಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಪ್ರಶ್ನಿಸಿದೆ.

ಸಂದೇಶ್‌ಖಾಲಿಯಲ್ಲಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ದೌರ್ಜನ್ಯ ಹಾಗೂ ಜಮೀನು ಕಬಳಿಕೆ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಕಲ್ಕತ್ತ ಹೈಕೋರ್ಟ್ ಏಪ್ರಿಲ್‌ 10ರಂದು ಆದೇಶಿಸಿದೆ. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಗೆ ಪ್ರತಿಯಾಗಿ ಸುಪ್ರೀಂ ಕೋರ್ಟ್‌ ಈ ಬಗೆಯಲ್ಲಿ ಪ್ರಶ್ನಿಸಿದೆ.

‘ಕೆಲವು ಖಾಸಗಿ ವ್ಯಕ್ತಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ರಾಜ್ಯ ಏಕೆ ಅರ್ಜಿ ಸಲ್ಲಿಸಬೇಕು’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರು ಇದ್ದ ವಿಭಾಗೀಯ ಪೀಠ ಪ್ರಶ್ನಿಸಿದೆ.

ಹೈಕೋರ್ಟ್‌ ಆಡಿದ ಕೆಲವು ಮಾತುಗಳು ಒಪ್ಪಿಗೆ ಆಗುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದರು. ‘ರಾಜ್ಯ ಸರ್ಕಾರದ ಬಗ್ಗೆ ಕೋರ್ಟ್ ಕೆಲವು ಮಾತುಗಳನ್ನು ಆಡಿದೆ. ಆ ಮಾತುಗಳು ನ್ಯಾಯಸಮ್ಮತವಾಗಿಲ್ಲ. ಏಕೆಂದರೆ, ಸರ್ಕಾರವು ಎಲ್ಲ ಬಗೆಯ ಕ್ರಮಗಳನ್ನು ಕೈಗೊಂಡಿದೆ’ ಎಂದು ವಕೀಲರು ಉತ್ತರಿಸಿದರು.

ಕೆಲವು ಮಾತುಗಳಿಂದ ನೋವಾಗಿದ್ದಲ್ಲಿ, ಆ ಮಾತುಗಳನ್ನು ಆದೇಶದಿಂದ ತೆಗೆದುಹಾಕುವಂತೆ ಕೋರಿ ಹೈಕೋರ್ಟ್‌ಗೇ ಮನವಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿತು. ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ.

ಹೈಕೋರ್ಟ್ ಆದೇಶವು ರಾಜ್ಯದ ಪೊಲೀಸ್ ಪಡೆ ಸೇರಿದಂತೆ ಇಡೀ ವ್ಯವಸ್ಥೆಯ ನೈತಿಕ ಸ್ಥೈರ್ಯವನ್ನು ಕುಂದಿಸಿದೆ ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ. ಸಂದೇಶ್‌ಖಾಲಿ ಕುರಿತ ಸಿಬಿಐ ತನಿಖೆಯನ್ನು ತಾನು ಮೇಲ್ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT