ಬೆಂಗಳೂರು: ‘ವಿಶೇಷ ಮಕ್ಕಳ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 15 ಶಿಕ್ಷಕರ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಉಳಿದ ಹುದ್ದೆಗಳನ್ನು ಒಪ್ಪಿಗೆ ದೊರೆತ ಬಳಿಕ ಭರ್ತಿ ಮಾಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ಬಿಜೆಪಿಯ ಮಹಾಂತೇಶ ಕವಟಗಿಮಠ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ನನ್ನ ಮಗ ಕೂಡ ವಿಶೇಷ ಮಗು. ನಾನು ಕೂಡ ವಿಶೇಷ ಮಕ್ಕಳ ಶಾಲೆ ನಡೆಸುತ್ತಿ ದ್ದೇನೆ. ಈ ಶಾಲೆಗಳ ಸಮಸ್ಯೆ ಇತ್ಯರ್ಥಕ್ಕೆ ಹೆಚ್ಚಿನ ನೆರವು ನೀಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡುತ್ತೇನೆ’ ಎಂದರು.