ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ

Published 7 ಸೆಪ್ಟೆಂಬರ್ 2023, 16:28 IST
Last Updated 7 ಸೆಪ್ಟೆಂಬರ್ 2023, 16:28 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿದೆ.

ಈ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆದಾಗ, ರೋಹಿಣಿ ಅವರು ಸರಿಯಾದ ಉತ್ತರ ನೀಡಿಲ್ಲ, ದಾಖಲೆಗಳನ್ನೂ ನೀಡಿಲ್ಲ. ಹೀಗಾಗಿ ಇಲಾಖೆ ತನಿಖೆ ನಡೆಸಲು ಸೂಚಿಸಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಐಎಎಸ್‌ ಅಧಿಕಾರಿ ಉಜ್ವಲ್ ಕುಮಾರ್ ಘೋಷ್‌ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಲಾಗಿದೆ.

ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಕೆ.ಆರ್. ನಗರ ಶಾಸಕರಾಗಿದ್ದ ಸಾ.ರಾ. ಮಹೇಶ್​ ಕೂಡ ಜಟಾಪಟಿ ನಡೆಸಿದ್ದರು. ವಿಧಾನಸಭೆಯಲ್ಲೂ ಇದರ ಪ್ರಸ್ತಾಪವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT