ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ–ಸೆಟ್: ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Published 2 ಮೇ 2024, 15:11 IST
Last Updated 2 ಮೇ 2024, 15:11 IST
ಅಕ್ಷರ ಗಾತ್ರ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ (ಕೆ-ಸೆಟ್) ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.

ಪತ್ರಿಕೆ-1 ಮತ್ತು ಪತ್ರಿಕೆ-2ರ ಎಲ್ಲಾ 41 ವಿಷಯಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಮೇ 10ರ ಒಳಗೆ ಪ್ರಾಧಿಕಾರದ ಇ-ಮೇಲ್‌ keakset2023@gmail.com ಗೆ ಸಲ್ಲಿಸಬೇಕು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ಕೆ-ಸೆಟ್ ಪರೀಕ್ಷೆ ಕಳೆದ ಜ.13ರಂದು ನಡೆದಿತ್ತು. ಏ.4ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT