ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka | ರಾಜ್ಯದ 28 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದ ಉಷ್ಣಾಂಶ

Published 1 ಮೇ 2024, 14:23 IST
Last Updated 1 ಮೇ 2024, 14:23 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಬುಧವಾರವೂ ಬಿಸಿ ಗಾಳಿ ಕಾಣಿಸಿಕೊಂಡಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಪ್ರಕಾರ ರಾಜ್ಯದ 28 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. 

ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ವರದಿಯಾಗಿದೆ. ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ ಹಾಗೂ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ವರದಿಯಾಗಿದೆ. ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆ ಕಾಣಿಸಿಕೊಂಡಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ. 

ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಬೆಂಗಳೂರು ಘಟಕವು ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗೆ ಗುರುವಾರ ‘ರೆಡ್‌ ಅಲರ್ಟ್’ ಘೋಷಿಸಿದ್ದು, ಈ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT