ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡ್ಡದ ನೇರಳಕೆರೆ: ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕ ಅಮಾನತು

Published 28 ಡಿಸೆಂಬರ್ 2023, 12:34 IST
Last Updated 28 ಡಿಸೆಂಬರ್ 2023, 12:34 IST
ಅಕ್ಷರ ಗಾತ್ರ

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಇಲಾಖೆ ವಿಚಾರಣೆ ಕಾಯ್ದಿರಿಸಿ ಗುರುವಾರ ಅಮಾನತುಗೊಳಿಸಿದ್ದಾರೆ.

ಭದ್ರಾವತಿ ಬಿಇಒ ನಾಗೇಂದ್ರಪ್ಪ ನೀಡಿದ ವರದಿ ಆಧರಿಸಿ ಡಿಡಿಪಿಐ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯ ಶಿಕ್ಷಕ ಹುದ್ದೆಯ ಪ್ರಭಾರದಲ್ಲಿದ್ದ ಶಂಕರಪ್ಪ ಕಳೆದ 11 ವರ್ಷಗಳಿಂದ ಗುಡ್ಡದ ನೇರಳಕೆರೆ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

ಪ್ರತ್ಯೇಕ ವಿಡಿಯೊ: ಶಾಲೆಯ ಸಮವಸ್ತ್ರದಲ್ಲಿರುವ ಹುಡುಗ-ಹುಡುಗಿಯರು ಪ್ರತ್ಯೇಕವಾಗಿ ಬ್ರಷ್ ನಲ್ಲಿ ನೆಲ ಉಜ್ಜಿ ಶೌಚಾಲಯ ಸ್ವಚ್ಛಗೊಳಿಸುವ ದೃಶ್ಯಗಳು ವಿಡಿಯೊದಲ್ಲಿವೆ.

ಡಿಎಸ್‌ಎಸ್ ದೂರು: ವಿಡಿಯೊ ಹರಿದಾಡುತ್ತಿದ್ದಂತೆಯೇ ದಲಿತ ಸಂಘರ್ಷ ಸಮಿತಿ ವತಿಯಿಂದ ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಲಾಯಿತು.

'ಶಾಲೆಯಲ್ಲಿ ಈ ರೀತಿ ಮಕ್ಕಳಿಂದ ಪದೇ ಪದೇ ಶೌಚಾಲಯ ಸ್ವಚ್ಛಗೊಳಿಸಲಾಗುತ್ತಿದೆ. ಸ್ವಚ್ಛಗೊಳಿಸಲು ನಿರಾಕರಿಸುವ ಮಕ್ಕಳ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ. ಹೀಗಾಗಿ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮನವಿ ಸಲ್ಲಿಸಲಾಯಿತು.

ಬಿಇಓ ಭೇಟಿ: ನಂತರ ಭದ್ರಾವತಿ ವಲಯ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಗುಡ್ಡದ ನೇರಳಕೆರೆ ಶಾಲೆಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT