ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿ ತರೂರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಸುನಂದಾ ಪುಷ್ಕರ್ ಸಾವು ಪ್ರಕರಣ
Last Updated 5 ಜುಲೈ 2018, 10:48 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್‌ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣದಲ್ಲಿ ಶಶಿ ತರೂರ್‌ಗೆ ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

‘₹ 1 ಲಕ್ಷದ ಮೌಲ್ಯದ ಬಾಂಡ್ ನೀಡಬೇಕು, ಸಾಕ್ಷ್ಯ ನಾಶ ಮಾಡಬಾರದು ಮತ್ತು ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ದೇಶ ಬಿಟ್ಟು ಹೋಗುವಂತಿಲ್ಲ’ ಎಂಬ ಷರತ್ತುಗಳನ್ನು ವಿಧಿಸಿದೆ.

2014ರ ಜನವರಿ 17ರಂದು ಸುನಂದಾ ಪುಷ್ಕರ ಮೃತದೇಹ ದೆಹಲಿಯ ಪಂಚತಾರ ಹೋಟೆಲ್ ಕೊಠಡಿಯೊಂದರಲ್ಲಿ ಪತ್ತೆಯಾಗಿತ್ತು.

ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದ ವಿಶೇಷ ತನಿಖಾ ತಂಡ, ಶಶಿ ತರೂರ್ ಅವರನ್ನು ಬಂಧಿಸಿ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದೆ. ಹೀಗಾಗಿ ಜಮೀನು ಮಂಜೂರು ಮಾಡಬೇಕು ಎಂದು ಶಶಿ ತರೂರ್‌ ಮನವಿ ಮಾಡಿದ್ದರು.

ತನಿಖೆಗೆ ಎಲ್ಲಾ ಸಾಕ್ಷ್ಯಗಳಿವೆ ಎಂದಿರುವ ನ್ಯಾಯಾಲಯ, ಇದೇ 7ರಂದು ತನಿಖೆಗೆ ಹಾಜರಾಗುವಂತೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT