ಬೀಜಿಂಗ್: ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ದಾಖಲೆ ಪ್ರಮಾಣದ ಮಳೆ ಸುರಿಯುತ್ತಿದ್ದು, ಪ್ರವಾಹಕ್ಕೆ ಸಿಲುಕಿ ಮೃತರಾದವರ ಸಂಖ್ಯೆ 33ಕ್ಕೆ ಏರಿದೆ. ಇನ್ನೂ 18 ಜನ ಕಾಣೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ 59,000 ಮನೆಗಳು ಹಾನಿಯಾಗಿದ್ದು, 1,50,000ಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಅಂದಾಜು 15,000 ಹೆಕ್ಟೇರ್ ಕೃಷಿ ಭೂಮಿಯನ್ನು ಪ್ರವಾಹ ಆವರಿಸಿಕೊಂಡಿದೆ ಎಂದು ಸರ್ಕಾರ ತಿಳಿಸಿದೆ.
100ಕ್ಕೂ ಹೆಚ್ಚು ಸೇತುವೆಗಳು ಹಾನಿಯಾಗಿದ್ದು, ಸಂಚಾರ ವ್ಯತ್ಯಯವಾಗಿದೆ. ಈಗ ಆಗಿರುವ ಹಾನಿ ಸರಿಪಡಿಸಲು ಕನಿಷ್ಠ ಮೂರು ವರ್ಷ ಬೇಕಾಗಬಹುದು. ಪ್ರವಾಹ ಪೀಡಿತ ಸ್ಥಳಗಳಲ್ಲಿ ಜನರ ರಕ್ಷಣೆಗೆ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಬೀಜಿಂಗ್‌ನ ಉಪಮೇಯರ್ ಕ್ಸೈ ಲಿನ್‌ಮಾವೋ ತಿಳಿಸಿದ್ದಾರೆ.