ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಚೀನಾದಲ್ಲಿ ಭಾರಿ ಸುಂಟರಗಾಳಿ: ಐವರು ಸಾವು, 33 ಮಂದಿಗೆ ಗಾಯ

Published 28 ಏಪ್ರಿಲ್ 2024, 3:12 IST
Last Updated 28 ಏಪ್ರಿಲ್ 2024, 3:12 IST
ಅಕ್ಷರ ಗಾತ್ರ

ಬೀಜಿಂಗ್ (ಚೀನಾ): ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ಶನಿವಾರ ಮಧ್ಯಾಹ್ನ ನಗರದ ಬೈಯುನ್ ಜಿಲ್ಲೆಯಲ್ಲಿ ಪ್ರಬಲವಾದ ಸುಂಟರಗಾಳಿ ಬೀಸಿದೆ. ಪರಿಣಾಮ 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೈಯುನ್ ಜಿಲ್ಲೆಯ ಲಿಯಾಂಗ್ಟಿಯಾನ್ ಹಳ್ಳಿಯಲ್ಲಿರುವ ಹವಾಮಾನ ಕೇಂದ್ರದಲ್ಲಿ ಸೆಕೆಂಡಿಗೆ ಗರಿಷ್ಠ 20.6 ಮೀಟರ್ ಗಾಳಿ ದಾಖಲಾಗಿದೆ.

ಸುಂಟರಗಾಳಿ ಬಳಿಕ ದಕ್ಷಿಣ ಚೀನಾದಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಸದ್ಯ ಚೀನಾ ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ದೇಶದಲ್ಲಿ 1961ರಿಂದ 50 ವರ್ಷಗಳಲ್ಲಿ ಸುಂಟರಗಾಳಿಗೆ ಕನಿಷ್ಠ 1,772 ಜನರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT