ನ್ಯೂಯಾರ್ಕ್: ಅಮೆರಿಕದಲ್ಲಿರುವ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯ ಆವರಣದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಮಾಡಿದರು.
ಈ ಯೋಗ ದಿನದ ಕಾರ್ಯಕ್ರಮಕ್ಕೆ 180ಕ್ಕೂ ಹೆಚ್ಚು ದೇಶಗಳ ಜನರು ಪ್ರಧಾನಿ ನರೇಂದ್ರ ಮೋದಿ ಜತೆ ಸೇರಿದ್ದಾರೆ. ಸಮಾರಂಭದಲ್ಲಿ ರಾಜತಾಂತ್ರಿಕರು, ರಾಜಕೀಯ ಮುಖಂಡರು, ವಿವಿಧ ಕ್ಷೇತ್ರಗಳಲ್ಲಿನ ಗಣ್ಯರು ಸೇರಿದಂತೆ ಹಲವಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಯೋಗ ದಿನಾಚರಣೆಯ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿಕೊಂಡಿದ್ದಾರೆ. 180ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.
Delighted to take part in the #YogaDay programme at @UN HQ. Let us make Yoga a part of our lives and further wellness. https://t.co/XvsB8AYfGs