ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ಸವಗಳು ಅನಗತ್ಯ!

Last Updated 27 ಜುಲೈ 2018, 19:30 IST
ಅಕ್ಷರ ಗಾತ್ರ

ಆಗಸ್ಟ್ ತಿಂಗಳ 11, 12ರಂದು ಮೈಸೂರು ಜಿಲ್ಲೆಯಲ್ಲಿ ಚುಂಚನಕಟ್ಟೆ ಜಲಪಾತೋತ್ಸವ, 18, 19ರಂದು ಚಾಮರಾಜನಗರ ಜಿಲ್ಲೆಯಲ್ಲಿ ಭರಚುಕ್ಕಿ ಜಲಪಾತೋತ್ಸವ ಹಾಗೂ 25, 26ರಂದು ಮಂಡ್ಯ ಜಿಲ್ಲೆಯಲ್ಲಿ ಗಗನಚುಕ್ಕಿ ಜಲಪಾತೋತ್ಸವ ನಡೆಸಲಾಗುವುದೆಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೇಳಿರುವುದು ವರದಿಯಾಗಿದೆ.

ಕಾವೇರಿ ನದಿಯ ವ್ಯಾಪ್ತಿಯಲ್ಲಿ ಬರುವ ಈ ಜಲಪಾತಗಳು ಈಗಾಗಲೇ ಪ್ರವಾಸಿಗರ ಮೆಚ್ಚಿನ ತಾಣಗಳೆನಿಸಿವೆ. ಆದರೆ ಆ ಕೇಂದ್ರಗಳಲ್ಲಿ ಸೌಲಭ್ಯಗಳ ಕೊರತೆ ತೀವ್ರವಾಗಿದೆ. ಜಲಪಾತೋತ್ಸವದ ಹೆಸರಿನಲ್ಲಿ ಹಲವು ಕೋಟಿ ರೂಪಾಯಿ ವ್ಯಯ ಮಾಡುವ ಬದಲಿಗೆ, ಅದೇ ಹಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದಲ್ಲವೇ?

ಪ್ರವಾಸಿ ತಾಣಗಳಲ್ಲಿ ಸೌಲಭ್ಯಗಳನ್ನು ಕಲ್ಪಿಸಿದರೆ ಜನರು ತಾವಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಆದ್ದರಿಂದ ಪ್ರವಾಸೋದ್ಯಮ ಸಚಿವರು ಆಡಂಬರದ ಉತ್ಸವ ಬಿಟ್ಟು, ಪ್ರವಾಸಿ ಕೇಂದ್ರಗಳ ಅಭಿವೃದ್ಧಿಯತ್ತ ಗಮನ ಹರಿಸಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT