ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರಿಲ್ಲದ ಆಸ್ಪತ್ರೆ

Last Updated 6 ಜುಲೈ 2016, 19:30 IST
ಅಕ್ಷರ ಗಾತ್ರ

ಸರ್ಕಾರಿ ಆಸ್ಪತ್ರೆಗಳಿಗೆ ಒಂದು ವರ್ಷದಲ್ಲಿ ಕಾಯಕಲ್ಪ ನೀಡುವುದಾಗಿ ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಅವರು ಹೇಳಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ಮೂಲ ಸೌಲಭ್ಯಗಳನ್ನಷ್ಟೇ ಸುಧಾರಿಸಿದರೆ ಸಾಲದು. ಬಹುತೇಕ ಆಸ್ಪತ್ರೆಗಳಲ್ಲಿ ವೈದ್ಯರೇ ಇಲ್ಲ ಎನ್ನುವುದನ್ನು ಸಚಿವರು ಮರೆಯಬಾರದು.

100 ಹಾಸಿಗೆಗಳ ಹುನಗುಂದ ತಾಲ್ಲೂಕು ಆಸ್ಪತ್ರೆಗೆ ಒಬ್ಬ ವೈದ್ಯರೂ ಇಲ್ಲ. ಮಂಜೂರಾದ ಎಲ್ಲ ತಜ್ಞ ವೈದ್ಯರ ಹುದ್ದೆಗಳು ಅನೇಕ ವರ್ಷಗಳಿಂದ ಖಾಲಿ ಇವೆ.

ಬಹುತೇಕ ತಜ್ಞ ವೈದ್ಯರು ಜಿಲ್ಲಾ ಕೇಂದ್ರಗಳಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳನ್ನು ಕಟ್ಟಿಕೊಂಡು ಕೋಟಿಗಟ್ಟಲೆ ಹಣ ಸಂಪಾದಿಸುತ್ತಿದ್ದಾರೆ. ಅವರ ಮೇಲೆ ಸರ್ಕಾರಕ್ಕೆ ಯಾವುದೇ ನಿಯಂತ್ರಣ ಇಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ತುಂಬಲು ಕ್ರಮ ಜರುಗಿಸುವುದು ತುರ್ತು ಅಗತ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT