ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಥೆ ದೃಢವಾಗಲಿ

Last Updated 13 ಅಕ್ಟೋಬರ್ 2015, 19:30 IST
ಅಕ್ಷರ ಗಾತ್ರ

ಖಾಸಗಿ ದೂರಸಂಪರ್ಕ ಕಂಪೆನಿಗಳು 4ಜಿ ಮಟ್ಟಕ್ಕೆ ಏರಿದ್ದರೂ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ಗೆ ಇನ್ನೂ ಗ್ರಾಮಾಂತರ ಪ್ರದೇಶ ಹಾಗೂ ತಾಲ್ಲೂಕು ಕೇಂದ್ರಗಳಿಗೆ 3ಜಿ ಸೌಲಭ್ಯವನ್ನೂ ಸರಿಯಾಗಿ ಕೊಡಲು ಸಾಧ್ಯವಾಗುತ್ತಿಲ್ಲ.

‘ಡಿಜಿಟಲ್  ಇಂಡಿಯಾ’ ಯೋಜನೆ ಜಾರಿಗೆ ಮುಂದಾಗಿರುವ ಪ್ರಧಾನಿ 5 ಲಕ್ಷ ಹಳ್ಳಿಗಳಿಗೆ ಬ್ರಾಡ್‌ಬ್ಯಾಂಡ್‌ ಹಾಗೂ 300 ರೈಲು ನಿಲ್ದಾಣಗಳಿಗೆ ವೈಫೈ ಸೌಲಭ್ಯ ಕಲ್ಪಿಸುವುದಾಗಿ ಹೇಳುತ್ತಿದ್ದಾರೆ. ಆದರೆ ಬಿಎಸ್‌ಎನ್‌ಎಲ್‌ನಲ್ಲಿ ಈಗ ಲಭ್ಯವಿರುವ 2ಜಿ ಬ್ರಾಡ್‌ಬ್ಯಾಂಡ್‌ ತಾಲ್ಲೂಕು ಕೇಂದ್ರಗಳಲ್ಲಿ ಹಾಗೂ ಕೆಲವು ಜಿಲ್ಲಾ ಕೇಂದ್ರಗಳಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ.

ಇದರಿಂದ ಸರ್ಕಾರಿ ಕಚೇರಿಗಳ ಕೆಲಸಗಳಲ್ಲಿ ವ್ಯತ್ಯಯ ಉಂಟಾಗುತ್ತಿದೆ. ತಾಲ್ಲೂಕು ಕಚೇರಿಗಳಿಗೆ ಕೆಲಸದ ನಿಮಿತ್ತ ಬರುವ ಗ್ರಾಮೀಣ ಪ್ರದೇಶದ ಜನರಿಗೆ ಹಾಗೂ ಬ್ಯಾಂಕ್‌ ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ.  ಬಿಎಸ್ಎನ್ಎಲ್ ಖಾಸಗಿ ಕಂಪೆನಿಗಳ ಜೊತೆ ಪೈಪೋಟಿ ಮಾಡಲು ದೇಶದ ಎಲ್ಲ ಪ್ರದೇಶಕ್ಕೂ ಬ್ರಾಡ್‌ಬ್ಯಾಂಡ್‌ ಹಾಗೂ ವೈಫೈ ಸೌಲಭ್ಯವನ್ನು ವಿಸ್ತರಿಸಬೇಕು. ಆಗ ಮಾತ್ರ ಸರ್ಕಾರಿ ಸ್ವಾಮ್ಯದ ಈ ಸಂಸ್ಥೆ ಉಳಿದು ಸದೃಢವಾಗಲು ಸಾಧ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT