ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕರೂಪದ ಸಾಂಸ್ಕೃತಿಕ ನೀತಿ ಅವಶ್ಯ

Last Updated 26 ಜುಲೈ 2013, 19:59 IST
ಅಕ್ಷರ ಗಾತ್ರ

ಸಾಂಸ್ಕೃತಿಕ ನೀತಿಯು ಎಲ್ಲ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳನ್ನು ಏಕರೂಪದಲ್ಲಿ ಕಾಣಬೇಕು. ಸಾಹಿತ್ಯ ಅಕಾಡೆಮಿ, ನಾಟಕ ಅಕಾಡೆಮಿ, ಲಲಿತಕಲಾ ಅಕಾಡೆಮಿಗಳು ವರ್ಷಕ್ಕೆ ಒಂದು ತಿಂಗಳು ಕಡ್ಡಾಯವಾಗಿ ಗಡಿಯಂಚಿನಲ್ಲಿ ಹಾಗೂ ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಕೇರಳ ಹಾಗೂ ಗೋವಾ ರಾಜ್ಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆ ಮೂಲಕ ಅಲ್ಲಿನ ಕನ್ನಡಿಗರಲ್ಲಿನ ಅಸುರಕ್ಷ ಭಾವನೆಯನ್ನು ತೆಗೆದುಹಾಕಲು ಪ್ರಯತ್ನಿಸಬೇಕು.

ಬೆಂಗಳೂರಿನ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸುವ ಸಂಪ್ರದಾಯಕ್ಕೆ ಕೊನೆ ಹಾಡಿ ಇತರ ಜಿಲ್ಲೆಗಳಲ್ಲಿಯೂ ಸಮಾರಂಭಗಳನ್ನು ನಡೆಸಬೇಕು. ಅತ್ತಿಮಬ್ಬೆ ಪ್ರಶಸ್ತಿಯನ್ನು ಲಕ್ಕುಂಡಿಯಲ್ಲಿ, ಪಂಪ ಪ್ರಶಸ್ತಿಯನ್ನು ಅಣ್ಣಿಗೇರಿಯಲ್ಲಿ ನೀಡಲು ಸರ್ಕಾರ ಮುಂದಾಗಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT