ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WI vs IND T20I | ತಿಲಕ್ ವರ್ಮಾ ಅರ್ಧಶತಕ, ವಿಂಂ‌ಡೀಸ್ ಗೆಲುವಿಗೆ 153 ರನ್ ಗುರಿ

Published 6 ಆಗಸ್ಟ್ 2023, 16:34 IST
Last Updated 6 ಆಗಸ್ಟ್ 2023, 16:34 IST
ಅಕ್ಷರ ಗಾತ್ರ

ಗಯಾನ: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಸಾಧಾರಣ ಮೊತ್ತ ಪೇರಿಸಿದೆ.

ಪ್ರಾವಿಡೆನ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಾಸ್‌ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿದೆ.

ಭಾರತದ ಪರ ತಿಲಕ್ ವರ್ಮಾ 51, ಇಶಾನ್ ಕಿಶನ್ 27, ಹಾರ್ದಿಕ್ ಪಾಂಡ್ಯ 24 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ವೆಸ್ಟ್‌ ಇಂಡೀಸ್ ಪರ ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ರೊಮಾರಿಯೋ ಶೆಫರ್ಡ್ ತಲಾ ಎರಡು ವಿಕೆಟ್ ಪಡೆದರು.

153 ರನ್‌ ಗುರಿ ಬೆನ್ನತ್ತಿರುವ ವೆಸ್ಟ್‌ ಇಂಡಿಸ್‌ ಆರಂಭಿಕ ಆಘಾತ ಎದುರಿಸಿದೆ. ಮೊದಲ ಓವರ್‌ನಲ್ಲಿ 2 ವಿಕೆಟ್‌ ನಷ್ಟಕ್ಕೆ 3 ರನ್ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT