ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರ್ದಿಕ್‌‌ಗೆ ಒಂದು ಪಂದ್ಯ ನಿಷೇಧ; ಐಪಿಎಲ್ 2025ರ ಮೊದಲ ಪಂದ್ಯದಿಂದ ಹೊರಕ್ಕೆ!

Published 18 ಮೇ 2024, 10:52 IST
Last Updated 18 ಮೇ 2024, 10:52 IST
ಅಕ್ಷರ ಗಾತ್ರ

ಮುಂಬೈ: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತೀರಾ ಕಳಪೆ ಮಟ್ಟದ ಪ್ರದರ್ಶನ ನೀಡಿತ್ತಲ್ಲದೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲೂ ಮುಂಬೈ ಸೋಲು ಕಂಡಿದೆ. ಈಗ ಗಾಯದ ಮೇಲೆ ಬರೆ ಎಳೆದಂತೆ ನಾಯಕ ಹಾರ್ದಿಕ್ ಪಾಂಡ್ಯ ಭಾರಿ ಬೆಲೆ ತೆತ್ತಿದ್ದಾರೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ಲಖನೌ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್‌ರೇಟ್‌ಗೆ ಸಂಬಂಧಿಸಿದಂತೆ ಹಾರ್ದಿಕ್ ಪಾಂಡ್ಯ ಮೇಲೆ ಒಂದು ಪಂದ್ಯದ ನಿಷೇಧ ಹಾಗೂ ₹30 ಲಕ್ಷ ದಂಡ ವಿಧಿಸಲಾಗಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಪ್ಲೇ-ಆಫ್ ಪ್ರವೇಶಿಸುವಲ್ಲಿ ವಿಫಲವಾಗಿರುವ ಮುಂಬೈ, ಲೀಗ್ ಹಂತದ ತನ್ನೆಲ್ಲ 14 ಪಂದ್ಯಗಳನ್ನು ಪೂರ್ಣಗೊಳಿಸಿದೆ. ಇದರಿಂದಾಗಿ 2025ನೇ ಸಾಲಿನ ಐಪಿಎಲ್‌ನಲ್ಲಿ ಮೊದಲ ಪಂದ್ಯದಲ್ಲಿ ಆಡುವ ಅವಕಾಶದಿಂದ ಹಾರ್ದಿಕ್ ವಂಚಿತರಾಗಿದ್ದಾರೆ.

ಪ್ರಸಕ್ತ ಸಾಲಿನ ಟೂರ್ನಿಯಲ್ಲಿ ಮೂರನೇ ಸಲ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲರಾದ ಕಾರಣಕ್ಕೆ ಹಾರ್ದಿಕ್ ಮೇಲೆ ಒಂದು ಪಂದ್ಯದ ನಿಷೇಧ ಹೇರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT