ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್‌ಗೆ ಭಾರತದ ಆತಿಥ್ಯ

Published 30 ಏಪ್ರಿಲ್ 2024, 13:21 IST
Last Updated 30 ಏಪ್ರಿಲ್ 2024, 13:21 IST
ಅಕ್ಷರ ಗಾತ್ರ

ನವದೆಹಲಿ: ಭಾರತವು ಮುಂದಿನ ವರ್ಷ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ಸ್‌ನ ಅತಿಥ್ಯ ವಹಿಸಲಿದೆ. ಈ ಚಾಂಪಿಯನ್‌ಷಿಪ್‌ ಗುವಾಹಟಿಯ ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರದಲ್ಲಿ ನಡೆಯಲಿದೆ ಎಂದು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಮಂಗಳವಾರ ಪ್ರಕಟಿಸಿದೆ.

2008ರ ನಂತರ ಮೊದಲ ಬಾರಿ ಈ ಪ್ರತಿಷ್ಠಿತ ಚಾಂಪಿಯನ್‌ಷಿಪ್‌ ಭಾರತದಲ್ಲಿ ನಡೆಯುತ್ತಿದೆ. ಆ ವರ್ಷ ಪುಣೆಯಲ್ಲಿ ಈ ಟೂರ್ನಿ ನಡೆದಿತ್ತು.

‘ತಂಡ ಮತ್ತು ವೈಯಕ್ತಿಕ ವಿಭಾಗದ ಸ್ಪರ್ಧೆಗಳೆಲ್ಲವೂ ಭಾರತ ಬ್ಯಾಡ್ಮಿಂಟನ್ ಸಂಸ್ಥೆಯ ಈ ಶ್ರೇಷ್ಠತಾ ಕೇಂದ್ರದಲ್ಲಿ ನಡೆಯಲಿವೆ’ ಎಂದು ಫೆಡರೇಷನ್‌ ಪ್ರಕಟಣೆಯಲ್ಲಿ ತಿಳಿಸಿದೆ. ಇದರ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಮುಂದಿನ ಸಲದ ಥಾಮಸ್ ಮತ್ತು ಉಬರ್ ಕಪ್ ಫೈನಲ್ಸ್ ಡೆನ್ಮಾರ್ಕ್‌ನ ಹಾರ್ಸೆನ್ಸ್‌ನಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT