ADVERTISEMENT

ಸಿದ್ದರಾಮಯ್ಯ ರಾಜಕೀಯ ಸ್ಟಂಟ್‌ ಬಿಡಲಿ: ಎಚ್‌.ಡಿ. ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2024, 8:52 IST
Last Updated 24 ಮಾರ್ಚ್ 2024, 8:52 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್‌.ಡಿ.&nbsp;ಕುಮಾರಸ್ವಾಮಿ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್‌.ಡಿ. ಕುಮಾರಸ್ವಾಮಿ

   

ಬೆಂಗಳೂರು: ʼಬರ ಪರಿಹಾರದ ಹಣ ಬಿಡುಗಡೆಗೆ ಆದೇಶ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ರಾಜಕೀಯ ಸ್ಟಂಟ್‌. ಈ ರೀತಿಯ ರಾಜಕೀಯ ಸ್ಟಂಟ್‌ ಬಿಟ್ಟು ಕೆಲಸ ಮಾಡಲಿʼ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಹೃದಯ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಚೆನ್ನೈನಿಂದ ಭಾನುವಾರ ಬೆಂಗಳೂರಿಗೆ ವಾಪಸಾದ ಅವರು ಸುದ್ದಿಗಾರರ ಜತೆ ಮಾತನಾಡಿದರು.

ADVERTISEMENT

ನಮ್ಮ ತೆರಿಗೆ ನಮ್ಮ ಹಣ, ಅನುದಾನ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ ಎನ್ನುವುದೆಲ್ಲ ರಾಜಕೀಯ ಡ್ರಾಮಾ ಎಂದರು.

ʼಮೂರನೇ ಬಾರಿ ನನಗೆ ಶಸ್ತ್ರಚಿಕಿತ್ಸೆ ಆಗಿದೆ. ಇದು ಒಂದು ರೀತಿಯಲ್ಲಿ ಪುನರ್ಜನ್ಮ ಇದ್ದಂತೆ. ನನಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಸಾಯಿಬಾಬಾ ಭಕ್ತರು. ಅವರು ಸಾಯಿಬಾಬಾರಿಗೆ ಪೂಜೆ ಸಲ್ಲಿಸಿ ಬಂದು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ನಿಮಗೆ ಶಸ್ತ್ರಚಿಕಿತ್ಸೆ ನಡೆಸಿರುವುದು ಸಾಯಿಬಾಬಾ ಎಂದು ವೈದ್ಯರು ನನ್ನ ಬಳಿ ಹೇಳಿದರು. ನಾಡಿನ ಲಕ್ಷಾಂತರ ಅಭಿಮಾನಿಗಳ ಹಾರೈಕೆಯಿಂದ ನಾನು ಆರೋಗ್ಯವಾಗಿ ಬಂದಿದ್ದೇನೆʼ ಎಂದು ಹೇಳಿದರು.

ಮೂರರಿಂದ ನಾಲ್ಕು ದಿನಗಳ ಕಾಲ ವಿಶ್ರಾಂತಿ ಪಡೆಯುತ್ತೇನೆ. ನಂತರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತೇನೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನೂ ಮೂರರಿಂದ ನಾಲ್ಕು ದಿನಗಳೊಳಗೆ ಅಂತಿಮಗೊಳಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.