ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಣ್ಣನವರ ತತ್ವ, ಸಿದ್ದಾಂತ ‌ ಅಳವಡಿಸಿಕೊಳ್ಳಿ: ಮಹೇಂದ್ರ ಮೋದಿ

Published 10 ಮೇ 2024, 16:10 IST
Last Updated 10 ಮೇ 2024, 16:10 IST
ಅಕ್ಷರ ಗಾತ್ರ

ಕೆ.ಆರ್.ಪುರ: ‘ಬಸವಣ್ಣನವರು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರ ಆದರ್ಶ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಅವರು ತೋರಿದ ಮಾರ್ಗದಲ್ಲಿ ನಡೆಯಬೇಕಿದೆ’ ಎಂದು ಬೆಂಗಳೂರು ಪೂರ್ವ ತಾಲ್ಲೂಕು ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹೇಂದ್ರ ಮೋದಿ ತಿಳಿಸಿದರು.

ವರ್ತೂರಿನಲ್ಲಿ ಬಸವ ಜಯಂತಿ ಪ್ರಯುಕ್ತ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಬಸವಣ್ಣನವರು ಹಲವು ಸಾಮಾಜಿಕ ಸುಧಾರಣಾ ಕಾರ್ಯಗಳಿಂದಲೇ ಪ್ರಸಿದ್ಧಿಯಾದವರು. ಸಮಾಜದಲ್ಲಿ ಜಾತಿ ವ್ಯವಸ್ಥೆಯಿಂದ ಸಂಪೂರ್ಣವಾಗಿ ಮುಕ್ತವಾಗಿರಬೇಕು. ಸಮಾನತೆ ಇರಬೇಕೆಂದು ಬಯಸಿದ್ದರು ಎಂದರು.

ಕಾಯಕ ಯೋಗಿ ಬಸವಣ್ಣ ಅವರು ತಮ್ಮ ದೂರದೃಷ್ಟಿ ಚಿಂತನೆಯಿಂದ ಅಂದಿನ ಕಾಲದಲ್ಲಿ ಅನುಭವ ಮಂಟಪ ನಿರ್ಮಿಸುವ ಮೂಲಕ ವಿಶ್ವದಲ್ಲೇ ಮೊದಲ ಬಾರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿದ ಅವರು ನಮ್ಮೆಲ್ಲರಿಗೂ ಪ್ರೇರಣೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅವರ ಜೀವನ, ಆದರ್ಶ ಹಾಗೂ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದು ತಿಳಿಸಿದರು

ಮುಖಂಡರಾದ ವೆಂಕಟೇಶ ರೆಡ್ಡಿ, ಬಿ.ಎಸ್.ಶ್ರೀಧರ್, ಆರ್.ಸಿ.ಬಾಬು, ಕೃಪಾಕರ್, ಕವಿತಾ, ಅನಿತಾ, ಶ್ರೀನಿವಾಸ್, ಬಿ.ವಿ.ಮಂಜುನಾಥ್, ರಾಜೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT