ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಲ್ಲಕ್ಕಿ ಉತ್ಸವ: ಮದ್ಯ ಮಾರಾಟ ನಿಷೇಧ

Published 10 ಮೇ 2024, 16:14 IST
Last Updated 10 ಮೇ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಪೂರ್ವ ವಿಭಾಗದ ಜೆ.ಬಿ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವೀರಭದ್ರಸ್ವಾಮಿಯ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 11ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ.

ಉತ್ಸವದಲ್ಲಿ 30 ಪಲ್ಲಕ್ಕಿಗಳು ಪಾಲ್ಗೊಳ್ಳಲಿವೆ. ಉತ್ಸವಕ್ಕೆ ಸಾವಿರಾರರು ಭಕ್ತರು ಸೇರಲಿದ್ದಾರೆ. ಈ ಸಮಯದಲ್ಲಿ ಮದ್ಯದ ಅಮಲಿನಲ್ಲಿ ಕಿಡಿಗೇಡಿಗಳು ದುಷ್ಕೃತ್ಯ ಎಸಗಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಯಿದ್ದು ಮೇ 11ರಂದು ಬೆಳಿಗ್ಗೆ 6ರಿಂದ ಮೇ 12ರ ಮಧ್ಯಾಹ್ನ 1 ಗಂಟೆ ವರೆಗೆ ಈ ಠಾಣಾ ವ್ಯಾಪ್ತಿಯ ಎಲ್ಲ ಮದ್ಯದ ಅಂಗಡಿ, ಬಾರ್‌ ಹಾಗೂ ರೆಸ್ಟೋರೆಂಟ್‌ (ಸ್ಟಾರ್ ಹೋಟೆಲ್‌ ಹಾಗೂ ಕ್ಲಬ್‌ಗಳನ್ನು ಹೊರತು ಪಡಿಸಿ) ಬಂದ್‌ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT