ಮಡಿಕೇರಿ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಅಪರಾಧಿ ಪುಟ್ಟರಾಜು (32) ಎಂಬಾತನಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಈ ಕುರಿತು 2021ರಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐಗಳಾದ ರಾಮರೆಡ್ಡಿ, ಎಸ್.ಎನ್.ಜಯರಾಮ್, ಕೆ.ಎ.ಅಬ್ದಲ್ ಮಜೀದ್ ಪುಟ್ಟರಾಜುವನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ.ಪ್ರಶಾಂತಿ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದರು.
ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಮಹಮ್ಮದ್ ಶೌಕತ್ ಅಲಿ ಅವರು ವಾದ ಮಂಡಿಸಿದ್ದರು.