ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡವ ವಾರಿಯರ್ಸ್, ಕೂರ್ಗ್ ಬ್ಲಾಸ್ಟರ್ಸ್‍ಗೆ ಜಯ

ಮಡಿಕೇರಿಯಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್
Published 8 ಮೇ 2024, 4:46 IST
Last Updated 8 ಮೇ 2024, 4:46 IST
ಅಕ್ಷರ ಗಾತ್ರ

ಇಂದಿನ ಪಂದ್ಯ

ಬೆಳಿಗ್ಗೆ 8:30;ಟೀಮ್ ಲೆವರೇಜ್ ಮತ್ತು ಪ್ರಗತಿ ಕ್ರಿಕೆಟರ್ಸ್

ಮಧ್ಯಾಹ್ನ 1:30;ಅಂಜಿಗೇರಿ ನಾಡ್ ಮತ್ತು ರಾಯಲ್ ಟೈಗರ್ಸ್

***

ಮಡಿಕೇರಿ: ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಇಲ್ಲಿನ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ನಲ್ಲಿ ಮಂಗಳವಾರ ಕೊಡವ ವಾರಿಯರ್ಸ್ ತಂಡಕ್ಕೆ 7 ವಿಕೆಟ್‌ಗಳ ಹಾಗೂ ಕೂರ್ಗ್ ಬ್ಲಾಸ್ಟರ್ಸ್‍ಗೆ 5 ವಿಕೆಟ್‍ಗಳ ಜಯ ಲಭಿಸಿತು.

ಕೊಡವ ವಾರಿಯರ್ಸ್ ತಂಡ ಪ್ರಗತಿ ಕ್ರಿಕೆಟರ್ಸ್ ವಿರುದ್ಧ ಉತ್ತಮ ಪ್ರದರ್ಶನ ತೋರಿತು. ಟಾಸ್ ಗೆದ್ದ ಕೊಡವ ವಾರಿಯರ್ಸ್  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 113 ರನ್‌ಗಳನ್ನು ಗಳಿಸಿತು.

ಗುರಿಯನ್ನು ಬೆನ್ನತ್ತಿದ ಕೊಡವ ವಾರಿಯರ್ಸ್ 15.3 ಓವರ್‌ಗಳಲ್ಲಿಯೇ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿ, 7 ವಿಕೆಟ್‌ಗಳ ಜಯ ಸಾಧಿಸಿತು.

ಕೊಡವ ವಾರಿಯರ್ಸ್‌ನ ಎಂ.ಎಂ.ಸಂಜಯ್  28 ಎಸೆತಗಳಲ್ಲಿ 30 ರನ್‌ಗಳನ್ನು ಗಳಿಸಿ, 4 ವಿಕೆಟ್‌ಗಳನ್ನೂ ಪಡೆದು ಪಂದ್ಯ ಪುರುಷೋತ್ತಮ ಗೌರವಕ್ಕೆ ಪಾತ್ರರಾದರು.

ಕೂರ್ಗ್ ಬ್ಲಾಸ್ಟರ್ಸ್ ತಂಡ ಟೀಮ್ ವೈಲ್ಡ್ ಫ್ಲವರ್ ವಿರುದ್ಧ 5 ವಿಕೆಟ್‌ಗಳ ಜಯ ಗಳಿಸಿತು. ಟಾಸ್ ಗೆದ್ದ ಕೂರ್ಗ್ ಬ್ಲಾಸ್ಟರ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ವೈಲ್ಡ್ ಫ್ಲವರ್ ತಂಡ 15 ಓವರ್‌ಗಳಲ್ಲಿ 6 ವಿಕೆಟ್‍ಗಳ ನಷ್ಟಕ್ಕೆ 86 ರನ್‌ಗಳನ್ನು ಗಳಿಸಿತು.
ಕೂರ್ಗ್ ಬ್ಲಾಸ್ಟರ್ಸ್ ತಂಡ 13 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 87 ರನ್‌ಗಳನ್ನು ದಾಖಲಿಸಿ ವಿಜಯ ಸಾಧಿಸಿತು.
ಕೂರ್ಗ್ ಬ್ಲಾಸ್ಟರ್ಸ್ ತಂಡದ ನಿಖಿಲ್ ಬೋಪಯ್ಯ ಪಂದ್ಯ ಪುರುಷೋತ್ತಮ ಗೌರವಕ್ಕೆ ಪಾತ್ರರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT