ಭಾನುವಾರ, 2 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಭಗೀರಥ ಜಯಂತಿ ಆಚರಣೆ

Published 14 ಮೇ 2024, 16:13 IST
Last Updated 14 ಮೇ 2024, 16:13 IST
ಅಕ್ಷರ ಗಾತ್ರ

ಮಸ್ಕಿ: ಪಟ್ಟಣದ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಭಗೀರಥ ಜಯಂತಿ ಆಚರಿಸಲಾಯಿತು.

ಬಸವೇಶ್ವರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರೇಡ್–2 ತಹಶೀಲ್ದಾರ್ ರಾಘವೇಂದ್ರ ಭಗೀರಥರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಉಪ್ಪಾರ ಸಮಾಜದ ಮುಖಂಡರು ಹಾಜರಿದ್ದರು.

ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಭಗೀರಥರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.

ಪುರಸಭೆ, ತಾಲ್ಲೂಕು ಪಂಚಾಯಿತಿ, ಜೆಸ್ಕಾಂ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಭಗೀರಥರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿ ಆಚರಿಸಲಾಯಿತು. ವಿವಿಧ ಸರ್ಕಾರಿ ಶಾಲಾ–ಕಾಲೇಜುಗಳಲ್ಲಿಯೂ ಭಗೀರಥ ಜಯಂತಿ ಆಚರಿಸಲಾಯಿತು. ಉಪ್ಪಾರ ಸಮಾಜದ ಮುಖಂಡರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT