ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿ ಮರೆತು ಪೆನ್‌ಡ್ರೈವ್‌ ನೆಚ್ಚಿಕೊಂಡ ಕಾಂಗ್ರೆಸ್‌: ಬಿ.ವೈ.ವಿಜಯೇಂದ್ರ

Published 4 ಮೇ 2024, 10:54 IST
Last Updated 4 ಮೇ 2024, 10:54 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ಇಂಥ ಕ್ಷುಲ್ಲಕ ರಾಜಕಾರಣ ಶೋಭೆ ತರುವುದಿಲ್ಲ. ಗ್ಯಾರಂಟಿ ಬಿಟ್ಟು ಕೇವಲ ಪೆನ್‌ಡ್ರೈವ್ ಪ್ರಕರಣದಿಂದಲೇ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಉಮೇದಿನಲ್ಲಿದ್ದಾರೆ. ಅವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

‘ಈ ಪ್ರಕರಣ ಬಿಜೆಪಿಗೆ ಮುಳುವಾಗಲಿ ಎಂಬ ಅಪೇಕ್ಷೆ ಕಾಂಗ್ರೆಸ್‌ನವರದ್ದು. ಏಳೆಂಟು ದಿನಗಳಿಂದ ಗ್ಯಾರಂಟಿಗಳ ಬಗ್ಗೆ ವಿಶ್ವಾಸ ಕಳೆದುಕೊಂಡು, ಪೆನ್‌ಡ್ರೈವ್ ಮೇಲೆ ವಿಶ್ವಾಸ ಬೆಳೆಸಿಕೊಂಡಿದ್ದಾರೆ’ ಎಂದು ಅವರು ತಾಲ್ಲೂಕಿನ ಬಾಳೇಕುಂದ್ರಿ ಕೆ.ಎಚ್. ಗ್ರಾಮದಲ್ಲಿ ಶನಿವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಈ ಪ್ರಕರಣದಲ್ಲಿ ಬಿಜೆಪಿ ನಿಲುವು ಸ್ಪಷ್ಟ. ಯಾರೇ ತಪ್ಪಿತಸ್ಥರಿದ್ದರೂ ತನಿಖೆ ಎದುರಿಸಬೇಕು. ಇದರಲ್ಲಿ ಬೇರೆ ಮಾತಿಲ್ಲ’ ಎಂದೂ ಹೇಳಿದರು.

‘ಅಪಪ್ರಚಾರ ಮತ್ತು ಗ್ಯಾರಂಟಿಗಳ ಮೇಲೆ ಭರವಸೆ ಇಟ್ಟುಕೊಂಡ ಕಾಂಗ್ರೆಸ್‌ನವರು 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ಮತದಾರರು ಇವರ ಅಪಪ್ರಚಾರದ ಬಗ್ಗೆ ತಲೆ‌ಕೆಡಿಸಿಕೊಂಡಿಲ್ಲ. ಹಾಗಾಗಿ 28 ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ’ ಎಂದು ತಿರುಗೇಟು ಕೊಟ್ಟರು.

‘ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬರುತ್ತದೆ’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಮೋದಿ ಪ್ರಣಾಳಿಕೆಯಲ್ಲಿ ಪ್ರಕಟಿಸಿದ ಎಲ್ಲ ಭರವಸೆಗಳನ್ನು ಈಡೇರಿಸಿದ್ದಾರೆ. ಹಾಗಾಗಿ ಅವರ ಜ‌ನಪ್ರಿಯತೆ ಹೆಚ್ಚಿದ್ದು, ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT