ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ: ಕೆ.ಎಚ್.ಮುನಿಯಪ್ಪ

Published 30 ಏಪ್ರಿಲ್ 2024, 14:15 IST
Last Updated 30 ಏಪ್ರಿಲ್ 2024, 14:15 IST
ಅಕ್ಷರ ಗಾತ್ರ

ಮಾನ್ವಿ: ‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು’ ಎಂದು ರಾಯಚೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಯುಪಿಎ ಸರ್ಕಾರ ಆಡಳಿತದಲ್ಲಿದ್ದಾಗ ದೇಶದ ರೈತರ ಸುಮಾರು ₹72 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿತ್ತು. ಈಗ ಮತ್ತೆ ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ಆಯೋಗದ ವರದಿಯ ಶಿಫಾರಸುಗಳ ಅನ್ವಯ ರೈತರ ಬೆಳೆಗಳಿಗೆ ಎಂ.ಎಸ್.ಪಿ ನಿಗದಿ, ರೈತರ ಸಾಲ ಮನ್ನಾಕ್ಕೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.

‘ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಅಸಹಕಾರದ ಮಧ್ಯೆಯೂ ಅನ್ನಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ’ ಎಂದರು.

‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮೀ ಯೋಜನೆ ಅಡಿ ಎಲ್ಲಾ ಜಾತಿ, ವರ್ಗದ ಬಡ ಮಹಿಳೆಯರಿಗೆ ₹1 ಲಕ್ಷ ಸಹಾಯ ಧನ ಸಿಗಲಿದೆ’ ಎಂದು ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ ಜೋಳ ಖರೀದಿ ಕೇಂದ್ರಗಳನ್ನು ತೆರೆದು ಸುಮಾರು ಮೂರು ಲಕ್ಷ ಮೆಟ್ರಿಕ್ ಟನ್ ಜೋಳ ಸಂಗ್ರಹಿಸಲಾಗಿದೆ. ರಾಜ್ಯ ಸರ್ಕಾರ ರೈತರು ಹಾಗೂ ಜನಸಾಮಾನ್ಯರ ಪರವಾಗಿದೆ ಎಂದು ಹೇಳಿದರು.

ಜಿ.ಕುಮಾರ ನಾಯಕ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಶಿಫಾರಸಿನಂತೆ ಜಿ.ಕುಮಾರ ನಾಯಕ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಶಾಸಕ ಜಿ.ಹಂಪಯ್ಯ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್ ಹಾಗೂ ಬಿ.ಕೆ.ಅಮರೇಶಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT