ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

Published 6 ಮೇ 2024, 8:00 IST
Last Updated 6 ಮೇ 2024, 8:00 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.

ಕವಿತಾ ಅವರ ಅರ್ಜಿಯನ್ನು ತಿರಸ್ಕರಿಸಿರುವ ವಿಶೇಷ ನ್ಯಾ. ಕಾವೇರಿ ಬವೇಜಾ, ತನಿಖೆಯ ಈ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದಿದ್ದಾರೆ.

ಇ.ಡಿ ಮತ್ತು ಸಿಬಿಐ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಕವಿತಾ ನ್ಯಾಯಾಂಗ ಬಂಧನದಲ್ಲಿದ್ದಾರೆ.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಕವಿತಾ ಅವರನ್ನು ಹೈದರಾಬಾದ್‌ನ ಬಂಜಾರ ಹಿಲ್ಸ್‌ ನಿವಾಸದಲ್ಲಿ ಮಾರ್ಚ್‌ 15ರಂದು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT