ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

Published 8 ಮೇ 2024, 14:08 IST
Last Updated 8 ಮೇ 2024, 14:08 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿತ್ರೋಡಾ ಅವರ ರಾಜೀನಾಮೆಯನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವೀಕರಿಸಿದ್ದಾರೆ. ಸ್ಯಾಮ್‌ ಪಿತ್ರೋಡಾ ಅವರು ಸ್ವಂತ ನಿರ್ಧಾರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ನಡುವೆ ದೇಶದ ವಿವಿಧ ಭಾಗಗಳ ಭಾರತೀಯರು ಹೇಗೆ ಕಾಣುತ್ತಾರೆ ಎನ್ನುವ ಬಗ್ಗೆ ಸಂದರ್ಶನವೊಂದರಲ್ಲಿ ಪಿತ್ರೋಡಾ ನೀಡಿದ್ದ ಹೇಳಿಕೆ ರಾಜಕೀಯ ವಿವಾದವನ್ನು ಸೃಷ್ಟಿಸಿತ್ತು. ಪಿತ್ರೋಡಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರೂ ಖಂಡಿಸಿದ್ದರು.

ಸದ್ಯ ಅಮೆರಿಕದಲ್ಲಿ ನೆಲೆಸಿರುವ ಸ್ಯಾಮ್‌ ಪಿತ್ರೋಡಾ, ರಾಜೀವ್‌ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಅವರ ಸಲಹಾಗಾರರಾಗಿ ಭಾರತದಲ್ಲಿ ಕೆಲಸ ಮಾಡಿದ್ದರು. 2004ರಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಭಾರತದ ರಾಷ್ಟ್ರೀಯ ಜ್ಞಾನ ಆಯೋಗದ ಮುಖ್ಯಸ್ಥರ ಹುದ್ದೆಗೆ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಿತ್ರೋಡಾ ಅವರನ್ನು ಆಹ್ವಾನಿಸಿದ್ದರು. 2009 ರಲ್ಲಿ, ಅವರು ಸಾರ್ವಜನಿಕ ಮಾಹಿತಿ ಮೂಲಸೌಕರ್ಯ ಕುರಿತು ಮನಮೋಹನ್ ಸಿಂಗ್ ಅವರಿಗೆ ಸಲಹೆಗಾರರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT