ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡಿಗೆ ಕೊಟ್ಟು ಬಡಿಸಿಕೊಂಡ ಬಿಜೆಪಿಗರು: ಸಿಎಂ ಸಿದ್ದರಾಮಯ್ಯ

Published 9 ಮೇ 2024, 0:22 IST
Last Updated 9 ಮೇ 2024, 0:22 IST
ಅಕ್ಷರ ಗಾತ್ರ

ಬೆಂಗಳೂರು: ಹೊಸಕೋಟೆ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲ ಧರ್ಮಗಳ ಜನತೆ ಭಕ್ತಿ– ಗೌರವದಿಂದ ಭಾಗವಹಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಎಂಬುವರ ನೇಮಕಕ್ಕೆ ಬಿಜೆಪಿ ವ್ಯಕ್ತಪಡಿಸಿರುವ ಆಕ್ಷೇಪಕ್ಕೆ ಪ್ರತಿಕ್ರಿಯಿಸಿರುವ ಅವರು, ‘ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಏಕೆ ಬಡಿಸಿಕೊಳ್ಳುತ್ತೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ’ ಎಂದಿದ್ದಾರೆ.

‘ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022 ರ ಸಾಲಿನಲ್ಲಿ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಎಲ್ಲಿ ಅಡಗಿ ಕುಳಿತಿತ್ತು’ ಎಂದು ಪ್ರಶ್ನಿಸಿದ್ದಾರೆ.

‘ರಾಜ್ಯ ಬಿಜೆಪಿ ನಾಯಕರೇ ನಿಮಗೆ ಮಾನ– ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆ ವಾಪಸು ಪಡೆದು ರಾಜ್ಯ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT