ಭಾನುವಾರ, 2 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣದಲ್ಲಿ ಸಮರ್ಥ ಅಭ್ಯರ್ಥಿಗಳು: ಸಿದ್ದರಾಮಯ್ಯ

Published 13 ಮೇ 2024, 17:59 IST
Last Updated 13 ಮೇ 2024, 17:59 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ರಾಮೋಜಿಗೌಡ ಮತ್ತು ಡಿ.ಟಿ. ಶ್ರೀನಿವಾಸ್‌ ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಮರ್ಥ ಅಭ್ಯರ್ಥಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಬ್ಬರ ನಾಮಪತ್ರ ಸಲ್ಲಿಕೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಆರು ತಿಂಗಳ ಹಿಂದೆಯೇ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದ್ದು ಅವರಿಗೆ ಅನುಕೂಲವಾಗಿದೆ. ರಾಮೋಜಿ ಗೌಡ ಶಿಕ್ಷಕರಾಗಿ ಕೆಲಸ ಮಾಡಿದ್ದಾರೆ. ಪದವೀಧರರ ಸಮಸ್ಯೆಗಳ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿಯೂ ಇದೆ ಎಂದರು.

ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಮತದಾರರು ಕಾಂಗ್ರೆಸ್‌ ಬೆಂಬಲಿಸುತ್ತಾರೆ. ಪದವೀಧರರು ಮತ್ತು ಶಿಕ್ಷಕರಿಗೆ ಬಿಜೆಪಿ ನೆರವಾಗಿರಲಿಲ್ಲ. ಗ್ಯಾರಂಟಿ ಯೋಜನೆಗಳ ಮೂಲಕ ಕಾಂಗ್ರೆಸ್‌ ನೆರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸಚಿವರಾದ ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌ ನಾಮಪತ್ರ ಸಲ್ಲಿಕೆ ವೇಳೆ ಜತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT