ಪತ್ರಿಕೆ-1 ಮತ್ತು ಪತ್ರಿಕೆ-2ರ ಎಲ್ಲಾ 41 ವಿಷಯಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಮೇ 10ರ ಒಳಗೆ ಪ್ರಾಧಿಕಾರದ ಇ-ಮೇಲ್ keakset2023@gmail.com ಗೆ ಸಲ್ಲಿಸಬೇಕು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.