ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾಲೆಸ್ಟೀನ್‌ ಪರ ಪ್ರತಿಭಟನೆ: 2,100ಕ್ಕೂ ಹೆಚ್ಚು ಬಂಧನ

Published 3 ಮೇ 2024, 12:20 IST
Last Updated 3 ಮೇ 2024, 12:20 IST
ಅಕ್ಷರ ಗಾತ್ರ

ಲಾಸ್‌ ಏಂಜಲೀಸ್‌: ಅಮೆರಿಕದಾದ್ಯಂತ ವಿವಿಧ ಕಾಲೇಜುಗಳ ಕ್ಯಾಂಪಸ್‌ಗಳಲ್ಲಿ ಈಚೆಗೆ ಪ್ಯಾಲೆಸ್ಟೀನ್‌ ಪರ ನಡೆದ ಪ್ರತಿಭಟನೆ ವೇಳೆ ಪೊಲೀಸರು 2,100ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. 

ಕ್ಯಾಂಪಸ್‌ ಒಳಗಿದ್ದ ಪ್ರತಿಭಟನಕಾರರನ್ನು ಚದುರಿಸಲು ಅಧಿಕಾರಿಯೊಬ್ಬರು ಕೊಲಂಬಿಯಾ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಒಳಗೇ ಗುಂಡು ಹಾರಿಸಿದ್ದರು. ಆದರೆ, ಇದರಿಂದ ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಯಾವುದೇ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿರಲಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಹಮಾಸ್‌–ಇಸ್ರೇಲ್‌ ಯುದ್ಧ ನಿಲ್ಲಿಸುವಂತೆ ಏ.17ರಂದು ಕೊಲಂಬಿಯಾದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಆ ನಂತರದಲ್ಲಿ ಹಲವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಇಂಥದ್ದೇ ಪ್ರತಿಭಟನೆಗಳು ನಡೆದವು. ಈ ಮಧ್ಯೆ ಪರ–ವಿರೋಧಿ ಗುಂಪುಗಳ ಮಧ್ಯೆ ಘರ್ಷಣೆ ಉಂಟಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT