ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024 | DC vs MI: ಮುಂಬೈ ವಿರುದ್ಧ ಡೆಲ್ಲಿಗೆ 10 ರನ್‌ಗಳ ಜಯ

Published 27 ಏಪ್ರಿಲ್ 2024, 9:32 IST
Last Updated 27 ಏಪ್ರಿಲ್ 2024, 9:32 IST
ಅಕ್ಷರ ಗಾತ್ರ

ನವದೆಹಲಿ: ಶನಿವಾರದ ಐಪಿಎಲ್‌ ಟೂರ್ನಿಯಲ್ಲಿ ಮುಂಬೈ ವಿರುದ್ಧ ಡೆಲ್ಲಿ 10 ರನ್‌ಗಳ ಜಯ ಸಾಧಿಸಿತು.

ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹಾಗೂ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡಗಳು ಇಂದು  ಮುಖಾಮುಖಿಯಾಗಿದ್ದವು.

ಈ ಪಂದ್ಯ ದೆಹಲಿಯಲ್ಲಿ ನಡೆಯುತ್ತಿದ್ದು ಮೊದಲು ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿತ್ತು. ದೆಹಲಿ ತಂಡ ಮೊದಲು ಬ್ಯಾಟ್‌ ಮಾಡಿತು.

ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ದೆಹಲಿ 257 ರನ್‌ ಪೇರಿಸಿದೆ. ಗುರ್ಕ್ 84, ಸ್ಟಬ್ಸ್‌ 48, ಹೋಪ್‌ 41 ರನ್‌ ಹೊಡೆದು ಗಮನ ಸೆಳೆದರು. 

ಮುಂಬೈ ಪರ ಬೂಮ್ರಾ, ವುಡ್‌, ಚಾವ್ಲಾ, ನಬಿ ತಲಾ 1 ವಿಕೆಟ್‌ ಪಡೆದರು.

ಮುಂಬೈ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 247 ರನ್‌ಗಳಿಸಲು ಮಾತ್ರ ಸಾಧ್ಯವಾಯಿತು. ಈ ಮೂಲಕ ಮುಂಬೈ ತಂಡ 10 ರನ್‌ಗಳ ಸೋಲು ಅನುಭವಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT