ವ್ಯಾಯಾಮ ಶಾಲೆ ಉದ್ಘಾಟನೆ

ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಒಳಾಂಗಣ ಕ್ರೀಡಾಂಗಣದಲ್ಲಿ ಆಧುನಿಕ ಸಲಕರಣೆಗಳಿರುವ ವ್ಯಾಯಾಮ ಶಾಲೆಯನ್ನು (ಜಿಮ್) ಶಾಸಕ ರಾಮಲಿಂಗಾ ರೆಡ್ಡಿ ಮತ್ತು ಸೌಮ್ಯಾ ರೆಡ್ಡಿ ಇತ್ತೀಚೆಗೆ ಉದ್ಘಾಟಿಸಿದರು.
ಖಾಸಗಿ ವಲಯದ ವ್ಯಾಯಾಮ ಶಾಲೆಗಳು ಸಾಮಾನ್ಯ ಜನರಿಗೆ ದುಬಾರಿ. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ರಾಜ್ಯ ಸರ್ಕಾರ ಆರೋಗ್ಯ ರಕ್ಷಣೆಗೆ ವಿಶೇಷ ಗಮನಹರಿಸಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ವ್ಯಾಯಾಮ ಶಾಲೆ ಆರಂಭಿಸಿದೆ. ಸೂಕ್ತ ತರಬೇತುದಾರರ ಮಾರ್ಗದರ್ಶನಕ್ಕೂ ವ್ಯವಸ್ಥೆ ಮಾಡಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.